(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 29. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ತುಳಸಿ ಮದ್ದಿನೆನಿ ಅವರು ಡಿ.30ರಿಂದ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಪ್ರವಾಸ ಇಂತಿವೆ: ಡಿ.30ರ ಶುಕ್ರವಾರ ಸಂಜೆ 7.35ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಡಿ.31ರ ಶನಿವಾರ ಬೆಳಿಗ್ಗೆ 8 ಗಂಟೆಗೆ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ 11 ಗಂಟೆಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಇಲಾಖೆಯ ನಿಗಮಗಳ ಜಿಲ್ಲಾ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 2023ರ ಜನವರಿ 1ರ ಭಾನುವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಅವರ ಪತ್ರಾಂಕಿತ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.