ಸರಣಿ ಅಪಘಾತ ➤ 6 ಮಂದಿ ಭಕ್ತರು ಮೃತ್ಯು..!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 29.  ದೇವರ ದರ್ಶನಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಸರಣಿ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಮೃತಪಟ್ಟು, ಐವರು ಗಾಯಗೊಂಡಿರುವ ದಾರುಣ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಎಂಬಲ್ಲಿ ವರದಿಯಾಗಿದೆ.

ಗಾಯಗೊಂಡಿರುವ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅವರಲ್ಲಿ ನಾಲ್ವರು ಸ್ಥಿತಿ ಗಂಭೀರವಾಗಿದೆ.
ಕಾರ್ತಿಕೈ ದೀಪಂ ಹಬ್ಬದ ನಿಮಿತ್ತ ಟಾಟಾ ಏಸ್ ವಾಹನದಲ್ಲಿ ಪೊಝಿಚಲೂರ್ ಜ್ಞಾನಾಂಬಿಕ ನಗರದ 10 ಮಂದಿ ತಿರುವಣ್ಣಾಮಲೈ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಗೆ ಕಾರು ರಭಸವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

Also Read  ಮಹಿಳೆಯರ ವಿಡಿಯೋ ಹಾಗೂ ಫೋಟೋ ಚಿತ್ರೀಕರಣ ಮಾಡುತ್ತಿದ್ದ 60ರ ವೃದ್ದ ಅಂದರ್..!!


ಇದರ ಬಳಿಕ ಇನ್ನೊಂದು ವಾಹನ ಭಕ್ತರಿದ್ದ ಕಾರಿನ ಹಿಂಬದಿಗೆ ಬಂದು ಢಿಕ್ಕಿ ಹೊಡೆದಿದೆ. ಇದರಿಂದ ಕಾರು ಎರಡು ವಾಹನಗಳ ಮಧ್ಯೆ ಸಿಲುಕಿ ಪೂರ್ಣ ಜಖಂಗೊಂಡಿದೆ. ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಭಕ್ತರಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಈ ಬಗ್ಗೆ ಮಧುರಾಂತಕಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top