ಶಾಲಾ ಪ್ರವಾಸದ ಬಸ್ ಗೆ ಸರಕಾರಿ ಬಸ್ ಢಿಕ್ಕಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸಾಗರ, ಡಿ. 29.  ಶಾಲಾ ಪ್ರವಾಸದ ಬಸ್ ಮತ್ತು ಸರಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ ಗುರುವಾರದಂದು ಸಂಭವಿಸಿದೆ.

ಅಪಘಾತದಲ್ಲಿ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಆನಂದಪುರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸಾಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Also Read  PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ

error: Content is protected !!
Scroll to Top