ಭೀಕರ ರಸ್ತೆ ಅಪಘಾತ ➤ ಭಾರತೀಯ ಕ್ರಿಕಟರ್ ರಿಷಭ್ ಪಂತ್ ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರ ಗಾಯಗೊಂಡ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ.

ಇವರು ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ತಿಳಿಸಿದ್ದಾರೆ.

Also Read  ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು

error: Content is protected !!
Scroll to Top