ಬೆಳ್ತಂಗಡಿ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 30. ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಧರ್ಮಸ್ಥಳ ನಿವಾಸಿ ನಿತೇಶ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಅಗಿರುವ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದ್ದು, ಕಾರಿಗೂ ಹಾನಿಯಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top