(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಇಂದಿನ ದಿನಗಳಲ್ಲಿ ಅಡಿಕೆ ಬೆಳೆ ವಿಸ್ತರಣೆ ಆಗುತ್ತಿದ್ದು, ಇದು ಭವಿಷ್ಯದಲ್ಲಿ ಮಾರಕವಾಗಲಿದೆ. ಹೆಚ್ಚಾಗಿ ಅಡಿಕೆ ಬೆಳೆದರೆ ಅಡಿಕೆಗೆ ಹೆಚ್ಚು ದಿನಗಳ ಭವಿಷ್ಯವಿಲ್ಲ. ಅಡಿಕೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಕೊಡಬಾರದು ಎಂದು ಗೃಹಸಚಿವ ಅರಗ ಜಾ಼ನೇಂದ್ರ ಸದನದಲ್ಲಿ ಹೇಳಿದ್ದಾರೆ.
ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ವ್ಯಾಪ್ತಿ ವಿಸ್ತಾರವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಿಕೆ ಕೃಷಿ ಮಾಡುವ ರೈತರು ಸಂಕಷ್ಟದ ದಿನಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಡ್ರಿಪ್ ಗೆ ನೀಡುವ ಸಹಾಯವನ್ನು ನಿಲ್ಲಿಸಿದೆ ಎಂದು ಹೇಳಿದರು. ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅವರು ಈ ವಿಷಯದ ಬಗ್ಗೆ ಮಾತನಾಡಿದರು.