ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್‌ ಧರಿಸಿಲ್ಲವೆಂದು ಪೊಲೀಸರು ದಂಡ ವಿಧಿಸಿರುವ ವಿಲಕ್ಷಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

 

ಕಳೆದ ನವೆಂಬರ್‌ 29ರಂದು ಮಂಗಳಾದೇವಿಯಲ್ಲಿ ಟ್ರಾಫಿಕ್‌ ಉಲ್ಲಂಘಿಸಿದಕ್ಕಾಗಿ ಈ ನೋಟಿಸ್‌ ಜಾರಿಯಾಗಿದ್ದು, ಡಿ. 22ರಂದು ಚಾಲಕನ ಕೈಸೇರಿದೆ. ಇದರಲ್ಲಿ “ಕಾರು’ ಎಂದು ನಮೂದಿಸಲಾಗಿದ್ದು, ಉಲ್ಲಂಘನೆ ರೀತಿ ಕಾಲಂನಲ್ಲಿ “ಸಹಸವಾರ ಹೆಲ್ಮೆಟ್‌ ಧರಿಸಿಲ್ಲ’ ಎಂದಿದೆ. ನೋಟಿಸ್‌ನಲ್ಲಿ ಉಲ್ಲಂಘನೆ ನಡೆದ ಸ್ಥಳದ ಚಿತ್ರವಿದೆ. ಅದರಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಸಹ ಸವಾರ ಹೆಲ್ಮೆಟ್‌ ಇಲ್ಲದೆ ಸಂಚರಿಸುತ್ತಿರುವುದು ಕಾಣಿಸುತ್ತಿದ್ದು, ಸ್ವಲ್ಪ ದೂರದಲ್ಲಿ ಕಾರು ಕೂಡ ಇದೆ. ಮಂಗಳೂರು ನಗರ ಸಂಚಾರ ಪೊಲೀಸ್‌ ಆಟೋಮೇಶನ್‌ ಸೆಂಟರ್‌ನಿಂದ ನೋಟಿಸ್‌ ಕಳುಹಿಸುವ ಸಂದರ್ಭ ದ್ವಿಚಕ್ರ ವಾಹನ ಸವಾರನಿಗೆ ಕಳುಹಿಸುವ ಬದಲು ಕಾರು ಚಾಲಕನ ವಿಳಾಸಕ್ಕೆ ಕಳುಹಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Also Read  ಶೀಘ್ರದಲ್ಲಿ ಸುಸಜ್ಜಿತ ರಂಗ ಮಂದಿರ ನಿರ್ಮಾಣ ಕಾಮಗಾರಿ ➤ ಶಾಸಕ ಡಾ. ವೈ ಭರತ್ ಶೆಟ್ಟಿ

error: Content is protected !!
Scroll to Top