ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ

(ನ್ಯೂಸ್  ಕಡಬ) newskadaba.com ಬೆಂಗಳೂರು, ಡಿ.30.  ಕೆಎಸ್ ಆರ್ ಟಿಸಿ (KSRTC) ನೌಕರರು ಮುಂದಿನ 6 ತಿಂಗಳ ಕಾಲ  ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿ ಕರ್ನಾಟಕದ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ  ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇದರ ಪ್ರಕಾರ ಜ.1ರಿಂದ ಜೂನ್ 30ರವರೆಗೆ ಪ್ರತಿಭಟನೆಗಳನ್ನು ನಡೆಸದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಮುಷ್ಕರ ಮುಂದುವರಿದರೆ ಚುನಾವಣೆ ಸಮಯದಲ್ಲಿ ಸರ್ಕಾರಕ್ಕೆ ತಲೆನೋವಾಗಬಹುದು ಎಂಬ ಕಾರಣಕ್ಕೆ ಈ  ನಿರ್ಬಂಧ ವಿಧಿಸಲಾಗಿದೆ ಎಂದು ನೌಕರರು ಹಾಗೂ ನೌಕರರ ವಿವಿಧ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ ಎನ್ನಲಾಗಿದೆ.

Also Read  ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ

error: Content is protected !!
Scroll to Top