(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 30. ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ವರದಿಯಾಗಿದೆ.
ಮೃತರನ್ನು ವಂಸತ ರೈ (52) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಡುತ್ತಿದ್ದ ಇವರ ಮೃತದೇಹವು ಇಂದು ಬೆಳಗ್ಗೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.