ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥ

(ನ್ಯೂಸ್  ಕಡಬ) newskadaba.com ಯಾದಗಿರಿ, ಡಿ. 30. ಮೈ ಮೇಲೆ ಬಿಸಿ ಸಾಂಬಾರ್ ಬಿದ್ದು ಮೂವರು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿಯ ಜಿಲ್ಲೆಯ ಸುರಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೊಮ್ಮನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ನೀಡುವ ಸಂದರ್ಭ  ಬಿಸಿ ಸಾಂಬಾರ್ ಮೈಮೇಲೆ ಬಿದ್ದಿದ್ದು, ತಕ್ಷಣವೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಶಾಲಾ ಸಿಬ್ಬಂದಿಗಳ ನಿರ್ಲಕ್ಷತನದಿಂದ ಈ ಘಟನೆ ನಡೆದಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ವೈದ್ಯರ ಬೇಡಿಕೆಗಳ ಅಧ್ಯಯನಕ್ಕೆ ಕಾರ್ಯಪಡೆ ರಚನೆ - ಸಚಿವ ದಿನೇಶ್ ಗುಂಡುರಾವ್

error: Content is protected !!
Scroll to Top