(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟಲ್ಲಿರುವ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡುವುದಾಗಿ ವರದಿ ತಿಳಿಸಿದೆ.
ಇಂದು ಬೆಳಗ್ಗೆ ನವದೆಹಲಿಯಿಂದ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಸ್ಥಳೀಯರು ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು.