ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಡಿ.31ರ ಸಂಜೆ 6 ಗಂಟೆಯಿಂದ ಜ.01ರ ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ.

 

ಡ್ರಿಂಕ್ ಆಂಡ್ ಡ್ರೈವ್ ಅಪಘಾತ ಹಾಗೂ ಕೊರೊನಾ ಹರಡದಂತೆ ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೇ ನಂದಿಬೆಟ್ಟದ ಮೇಲೆ ಡಿ.31ರಂದು ರೂಮ್ ಬುಕಿಂಗ್ ಸಹ ರದ್ದುಗೊಳಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Also Read  ಮೊದಲ ಎಲೆಕ್ಟ್ರಿಕ್​​​ ಬಸ್​'ಗೆ ಅಧಿಕೃತ ಚಾಲನೆ

 

error: Content is protected !!
Scroll to Top