ಇನ್ನೂ 15,000 ಶಿಕ್ಷಕರ ನೇಮಕ ➤ ಸಿಎಂ ಬೊಮ್ಮಾಯಿ

(ನ್ಯೂಸ್  ಕಡಬ) newskadaba.com ಬೆಳಗಾವಿ, ಡಿ. 30. ಪ್ರಸ್ತುತ ಈ ವರ್ಷ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಚಾಲನೆ ನೀಡಲಾಗಿದ್ದು, ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಕುರಿತು ಪರಿಷತ್‌ನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆ ವೇಳೆ ಉತ್ತರಿಸಿದ ಅವರು, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಿಸಲು ಚಾಲನೆ ನೀಡಲಾಗಿದೆ. ಇನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕಾಲೇಜುಗಳಲ್ಲಿ ಉಪನ್ಯಾಸಕರ, ಸಹಪ್ರಾಧ್ಯಾಪಕರ ಹಾಗೂ ಪ್ರಾಧ್ಯಾಪಕರ ಬೋಧನಾ ಕಾರ್ಯ ಶೈಲಿಯನ್ನು ಬದಲಿಸಲಾಗುವುದು. ಈ ಬಗ್ಗೆ ಮುಂದಿನ ಬಜೆಟ್‌ ನಲ್ಲಿ ಘೋಷಿಸುವುದಾಗಿ ಸಿಎಂ ತಿಳಿಸಿದರು.

Also Read  ಜಾತಿ ಹೆಸರು ಬಳಸಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ..! ➤ದೂರು ದಾಖಲು

error: Content is protected !!
Scroll to Top