(ನ್ಯೂಸ್ ಕಡಬ) newskadaba.com ಕಡಬ, ಡಿ.04. ಕಾರೊಂದು ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡ ಘಟನೆ ಇಲ್ಲಿನ ಮುಖ್ಯ ಪೇಟೆಯ ಗಣೇಶ್ ಬಿಲ್ಡಿಂಗ್ ಸಮೀಪ ಸೋಮವಾರ ರಾತ್ರಿ ನಡೆದಿದೆ.
ಗಾಯಾಳುವನ್ನು ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿದ್ದು, ಇವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಯಿತು.