ವಿಟ್ಲ: ಆಟೋರಿಕ್ಷಾ ಹಾಗೂ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 30. ರಿಕ್ಷಾ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ.

ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಅಟೋರಿಕ್ಷಾ ಹಾಗೂ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೋ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group