ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 30. ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದರು.

ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೇರಿ ನಿರ್ಮಿಸಲಾಗುವುದು. ಈ ಮೂಲಕ, ದೇಶದದಿಂದ ಹಾಲು ರಫ್ತು ಮಾಡಲಾಗುವುದು. ರಾಜ್ಯದಲ್ಲಿ ಹೈನುಗಾರಿಕೆಗೆ ಬೇಕಾಗುವ ತಾಂತ್ರಿಕ ಸೌಲಭ್ಯ ಹಾಗೂ ಸಹಕಾರಿ ಕ್ಷೇತ್ರಕ್ಕೆ ಬೇಕಾಗುವ ಎಲ್ಲಾ ನೆರವನ್ನು ಸಹಕಾರ ಸಚಿವಾಲಯದಿಂದ ಒದಗಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹಾಗೂ ಮನ್ ಮೂಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.

Also Read  ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ

error: Content is protected !!
Scroll to Top