ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆರ್. ದಿಲೀಪ್ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಅನಾರೋಗ್ಯದಿಂದ ಬಳಲುತ್ತಿದ್ದ ಐಪಿಎಸ್​ ಅಧಿಕಾರಿ ಆರ್.ದಿಲೀಪ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 

ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿ ಆಗಿದ್ದ ದಿಲೀಪ್ ರವರು, ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿ ಇವರ ಯಕೃತ್ತು ಕಸಿ  ಮಾಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ದಿಲೀಪ್ ಅವರು ಮತ್ತೆ ಕರ್ತವ್ಯಕ್ಕೆ ಮರಳಿದ್ದರು. ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿಇ ಪದವೀಧರರಾಗಿದ್ದ ಇವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರಕನ್ನಡ ಹಾಗೂ ಹಲವು ಜಿಲ್ಲೆಗಳ ಎಸ್ಪಿ ಆಗಿದ್ದ ಇವರು, ಹುಬ್ಬಳ್ಳಿ-ಧಾರವಾಡ ಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದರು.

Also Read  ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ

 

error: Content is protected !!
Scroll to Top