ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕೊಂಬಾರು ನಿವಾಸಿ ಚಿದಾನಂದ (26) ಎಂದು ಗುರುತಿಸಲಾಗಿದೆ. ಈತ ಮರ್ಧಾಳದಿಂದ ತನ್ನ ಮನೆಯ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದಿದ್ದು, ಚಿದಾನಂದದ ತಲೆಗೆ ಏಟಾಗಿದೆ. ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಬಸ್‌ ಸಂಚಾರವು ಸೆ.21 ರಿಂದ ಪುನರಾರಂಭ

error: Content is protected !!
Scroll to Top