ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 31. ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾವಿನಕಟ್ಟ ಕೋಕ್ತಿ ಕ್ರಾಸ್ ಬಳಿ ವರದಿಯಾಗಿದೆ.

ಮೃತ ಪಾದಚಾರಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ (66) ಎಂದು ಗುರುತಿಸಲಾಗಿದೆ. ಈತ ಕೋಕ್ತಿ ಕ್ರಾಸ್ ನಿಂದ ಮಾವಿನಕಟ್ಟೆಯ ಮೀನು ಮಾರುಕಟ್ಟೆ ಕಡೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಮುರುಡೇಶ್ವರ ಕಡೆಯಿಂದ ಅತಿ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದು. ದೇಹದ ಭಾಗ ಸಂಪೂರ್ಣ ಚಿದ್ರ ಚಿದ್ರವಾಗಿತ್ತು ಎನ್ನಲಾಗಿದೆ. ಈ ಕುರಿತು ಮುರುಡೇಶ್ವರ ಪೊಲೀಸ್

ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top