(ನ್ಯೂಸ್ ಕಡಬ) newskadaba.com ಹೊಸಕೋಟೆ, ಡಿ. 31. ಸರ್ಕಾರಿ ಶಾಲಾ ಆವರಣದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ. ನಂದಗುಡಿ ಹೋಬಳಿಯ ಕೆಪಿಎಸ್ ಶಾಲೆಗೆ ತಮ್ಮ ವೈಯುಕ್ತಿಕ ಹಣದಿಂದ 25 ಡೆಸ್ಕ್ ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು ಮೊಬೈಲ್ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಪರಿಣಾಮ ಬೀರುತ್ತಿದ್ದು, ಫಲಿತಾಂಶ ಕುಂಠಿತಕ್ಕೆ ಕಾರಣವಾಗುತ್ತಿದೆ.
ಈ ಕುರಿತು ಶಿಕ್ಷಣ ಸಚಿವರು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ ನಾಗರಾಜ್, ನಗರಸಭೆ ಅಧ್ಯಕ್ಷ ಅಫ್ಸರ್, ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ. ಸುರೇಶ್, ಬಿಜೆಪಿ ತಾಲೂಕು ಎಸ್.ಸಿ. ಮೋರ್ಚಾ ಅಧ್ಯಕ್ಷ ಕೆ ನಾಗೇಶ್, ವಿ.ನಾರಾಯಣಸ್ವಾಮಿ, ರಾಜಣ್ಣ, ಸಿ.ದೇವರಾಜ್, ನಟರಾಜ್, ರಾಜಶೇಖರ್, ಮುನೇಗೌಡ, ಶಿವರಾಜ್ ಕುಮಾರ್, ಮಂಜುನಾಥ್ ಹಾಗೂ ಶಿಕ್ಷಕ ವೃಂದದವರು ಭಾಗಿಯಾಗಿದ್ದರು.