ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಡಿ. 31. ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ವರದಿಯಾಗಿದೆ.

ಮೃತರನ್ನು ಬೆಂಗಳೂರು ಕುಂಬಾರಪೇಟೆಯ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದು ನಿಲ್ಲಿಸಿದ್ದ ಬಸ್ಸಿನ ಮೇಲೆ ಮಲಗಿದ್ದ ಶ್ರೀನಾಥ್ ಟಾಪ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top