ಇಂದಿನಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ ಅವರು ಇಂದಿನಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.


ಡಿ.31ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಇಲಾಖೆಗಳ ಯೋಜನೆಯ ಪ್ರಗತಿ ಪರಿಶೀಲನೆ ಕುರಿತು ಕ್ಷೇತ್ರ ವೀಕ್ಷಣೆ ನಡೆಸುವರು. ನಂತರ ವಾಸ್ತವ್ಯ ಹೂಡಲಿದ್ದಾರೆ. 2023ರ ಜನವರಿ 1ರಂದು ಪ್ರಸಿದ್ಧ ಕ್ಷೇತ್ರಗಳಿಗೆ ಭೇಟಿ ನೀಡುವರು. ನಂತರ ಬೆಳಿಗ್ಗೆ 10.15ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸುವರು.

Also Read  ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

error: Content is protected !!
Scroll to Top