ಜ. 05ರಂದು ಭಾಗೀದಾರರ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಆರ್.ಟಿ.ಇ-2009, ಪೋಕ್ಸೊ-2012 ಹಾಗೂ ಬಾಲನ್ಯಾಯ ಕಾಯ್ದೆ- 2015ರ ಅನುಷ್ಟಾನದ ಕುರಿತು ಭಾಗೀದಾರರಾದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳನ್ನು ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರುಗಳೊಂದಿಗೆ ಸಮಾಲೋಚನಾ ಸಭೆ, ಪ್ರಗತಿ ಪರಿಶೀಲನಾ ಸಭೆ 2023ರ ಜನವರಿ 5ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ರಾಜ್ಯದಲ್ಲಿ ಇಂದು 216 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆ

error: Content is protected !!
Scroll to Top