(ನ್ಯೂಸ್ ಕಡಬ) newskadaba.com ನೆಟ್ಟಣ, ಡಿ. 31. ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು, ಲೋಕೋಪೈಲಟ್ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೇ ನಿಲ್ದಾಣದಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ.
ಮಂಗಳೂರು,ಪುತ್ತೂರು, ಸುಳ್ಯ ಅಗ್ನಿಶಾಮಕದಳವು ರೈಲ್ವೇ ಇಲಾಖೆಯ ಸಹಾಕರದೊಂದಿಗೆ ಅನಿಲ ಸೋರಿಕೆಯನ್ನು ತಡೆಯುವ ಕಾರ್ಯಚರಣೆ ನಡೆಸಿದೆ ಎನ್ನಲಾಗಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲು ನೆಟ್ಟಣ ನಿಲ್ದಾಣದಲ್ಲಿ ರೈಲನ್ನು ಕ್ರಾಸಿಂಗ್ ಗಾಗಿ ನಿಲ್ಲಿಸಿ ಪೈಲೆಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್ ಗಳ ಪೈಕಿ ನಾಲ್ಕನೇ ಟ್ಯಾಂಕ್ ನಿಂದ ಅನಿಲ ಸೋರಿಕೆ ಬೆಳಕಿಗೆ ಬಂದಿದೆ. ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ.