ಹೊಸ ವರ್ಷಾಚರಣೆ ➤ 30 ಫ್ಲೈ ಓವರ್ ಬಂದ್, ಲಕ್ಷಕ್ಕೂ ಅಧಿಕ ಸಿಸಿಟಿವಿಗಳ ಅಳವಡಿಕೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಹೊಸವರ್ಷದ ಸಂಭ್ರಮಕ್ಕೆ ಕೌಂಟ್‌ ಡೌನ್‌ ಶುರುವಾಗಿದ್ದು, 2023ನ್ನು ಬರ ಮಾಡಿಕೊಳ್ಳಲು ಇಡೀ ನಗರವೇ ಸಜ್ಜಾಗಿದೆ. ಡಿ. 31ರ ಸಂಜೆಯಾಗುತ್ತಿದ್ದಂತೆಯೇ ಇಡೀ ಸಿಲಿಕಾನ್‌ ಸಿಟಿ ಜಗಮಗಿಸಲಿದ್ದು, ಹೀಗಾಗಿ ಪೊಲೀಸರು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೂ ನಗರದ 30 ಫ್ಲೈ ಓವರ್ ಮೇಲೆ ದ್ವಿಚಕ್ರ ಸೇರಿ ಎಲ್ಲ​ ವಾಹನ ಸಂಚಾರ ನಿಷೇಧಿಸಲಾಗಿದೆ.

 

ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು ಮಹಾನಗರ ಸಿದ್ಧವಾಗುತ್ತಿದ್ದು ಬೆಂಗಳೂರು ನಗರದಾದ್ಯಂತ ಅಹಿತಕರ ಘಟನೆ ನಡೆಯದಂತೆ 1 ಲಕ್ಷಕ್ಕೂ ಅಧಿಕ ಸಿಸಿಟಿವಿಗಳ ಅಳವಡಿಕೆ ಮಾಡಲಾಗುತ್ತಿದ್ದು, ಚರ್ಚ್​​ಸ್ಟ್ರೀಟ್​, ಬ್ರಿಗೇಡ್​ ರಸ್ತೆಯೊಂದರಲ್ಲಿ ಸಾವಿರಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗುತ್ತಿದೆ. ಸಿಸಿಟಿವಿ ಮಾನಿಟರಿಂಗ್ ರೂಮ್​​ನಲ್ಲಿ ಕುಳಿತು ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ. ಅಹಿತಕರ ಘಟನೆಯಾದರೆ ಕೂಡಲೇ ಸ್ಥಳದಲ್ಲಿರುವ ಸಿಬ್ಬಂದಿಗೆ ಮಾಹಿತಿ ನೀಡುವಂತೆ ತಯಾರಿ ಮಾಡಿಕೊಳ್ಳಲಾಗಿದೆ.

Also Read  ?? ತಡರಾತ್ರಿ ಮನೆಗೆ ನುಗ್ಗಿ ಬಾಲಕಿಯನ್ನೇ ಹೊತ್ತೊಯ್ದ ಕಳ್ಳರು..!!!!

error: Content is protected !!
Scroll to Top