(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 31. ಮನೆಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚೆನ್ನೈನ ನಾಮಕ್ಕಲ್ ಜಿಲ್ಲೆಯಲ್ಲಿ ವರದಿಯಾಗಿದೆ.
ಮೃತಪಟ್ಟವರನ್ನು ತಿಲ್ಲೈ ಕುಮಾರ್, ಅವರ ತಾಯಿ ಸೆಲ್ವಿ (57) ಮತ್ತು ಪತ್ನಿ ಪ್ರಿಯಾ (27) ಎಂದು ಗುರುತಿಸಲಾಗಿದೆ. ಪರವಾನಗಿ ಹೊಂದಿರುವ ತಿಲ್ಲೈ ಕುಮಾರ್ (37) ಎಂಬಾತ ತನ್ನ ಮನೆಯಲ್ಲಿ ಪಟಾಕಿಯನ್ನು ಸಂಗ್ರಹಿಸಿಟ್ಟಿದ್ದ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದವರು ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಮಾಡಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.