ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ➤ 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಡಿ. 31. ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣ ಪ್ರಯಾಣಿಸುತ್ತಿದ್ದ ಕಾರೊಂದು ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕರು ಸೇರಿದಂತೆ 6 ಜನರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.

Also Read  20 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ ಪಡೆದ CBN​

error: Content is protected !!
Scroll to Top