(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಹೊಸ ವರ್ಷಾಚರಣೆಗೆ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಜಿಲ್ಲಾಧಿಕಾರಿಯ ಸಭೆಯಂತೆ ನಿಯಾಮಾವಳಿ ರೂಪಿಸಲಾಗಿದೆ. ನ್ಯೂ ಈಯರ್ ಪಾರ್ಟಿ ಆಯೋಜಿಸುವವರು ಡಿ.31 ರಂದು 12.30ಕ್ಕೆ ಕಾರ್ಯಕ್ರಮ ಮುಗಿಸಬೇಕು. ಅನುಮತಿ ಪಡೆದಿದ್ದರೂ ರಾತ್ರಿ 10 ಗಂಟೆಗೆ ಧ್ವನಿವರ್ಧಕಗಳನ್ನು ಬಂದ್ ಮಾಡಬೇಕು ಎಂದು ತಿಳಿಸಿದರು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಈ ಪೈಕಿ 16 ಚೆಕ್ ಪಾಯಿಂಟ್ ಗಳಿರುತ್ತದೆ. ಅತಿ ವೇಗ, ಅಜಾಗರೂಕತೆಯ ವಾಹನ ಚಾಲನೆಯ ಮೇಲೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು. ರಾತ್ರಿ 12.30ಕ್ಕೆ ಎಲ್ಲವೂ ಬಂದ್ ಆಗಬೇಕು. ಆ ಬಳಿಕ ಯಾರೂ ರಸ್ತೆಯಲ್ಲಿ ಇರಬಾರದು. ಪರವಾನಿಗೆ ಇಲ್ಲದೆ ಯಾವುದೇ ಆಚರಣೆಗೆ ಅವಕಾಶವಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ.