(ನ್ಯೂಸ್ ಕಡಬ) newskadaba.com ಲಖನೌ, ಡಿ. 31. 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಕೊಳವೆ ಬಾವಿಗೆ ತಳ್ಳಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರದಂದು ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಬಂಧಿಸಿದ್ದು, ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ. ಕಸ ಎಸೆಯಲು ಹೋದಾಗ ಮನೆಯಿಂದ ಸುಮಾರು 200 ಮೀಟರ್ ದೂರದ ಕೊಳವೆ ಬಾವಿಯಲ್ಲಿ, ಕೈ- ಕಾಲುಗಳಿಗೆ ಹಗ್ಗ ಕಟ್ಟಿ ಹಾಗೂ ಬಾಯಿಗೆ ಬಟ್ಟೆ ತುರುಕಿದ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ ಎಂದು ಜಿಲ್ಲೆಯ ಹೆಚ್ಚುವರಿ ಎಸ್ ಪಿ ತ್ರಿಭುವನ್ ನಾಥ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿಲಾಗಿದೆ.