ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ದ್ವಿಚಕ್ರ ವಾಹನಕ್ಕೆ ಸೀಬರ್ಡ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಬಾಲಕಿ ತಂದೆಗೆ ಗಂಭೀರ ಗಾಯಗೊಂಡ ಘಟನೆ ಕಾರವಾರದ ಬಿಣಗಾದಲ್ಲಿ ವರದಿಯಾಗಿದೆ.

ಮೃತ ಬಾಲಕಿಯನ್ನು ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಹಾಗೂ ಗಾಯಗೊಂಡ ತಂದೆಯನ್ನು ಜಾರ್ಜ್ ಫೆರ್ನಾಂಡೀಸ್‌ (41) ಎಂದು ಗುರುತಿಸಲಾಗಿದೆ. ಬಟ್ಟೆ ಖರೀದಿಸುವ ಉದ್ದೇಶದಿಂದ ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದ ವೇಳೆ‌ ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್, ಆ್ಯಕ್ಟಿವಾದ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯ ತಲೆ ರಸ್ತೆಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕಿ ತಂದೆಯನ್ನು ಕಾರವಾರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ

error: Content is protected !!
Scroll to Top