ಮಂಗಳೂರು: ಜ.3ರಂದು ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನ         

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ -2023 ಜ.3ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದ್ದು, ಎಂಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ಪತ್ರಕರ್ತರ ಸಂಚಯನ ನಿಧಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಲಿದ್ದಾರೆ. ಪರಿಸರ ಸ್ನೇಹಿ ಯೋಜನೆಗೆ ಎಸ್ ಸಿಡಿಸಿಸಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಚಾಲನೆ ನೀಡಲಿದ್ದಾರೆ. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ‘ಭಾವ ಚಿತ್ರ ಯಾನ -2’ ಕೃತಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಬಿಡುಗಡೆಗೊಳಿಸಲಿದ್ದಾರೆ. ಪತ್ರಕರ್ತ ವಿಕ್ರಂ ಕಾಂತಿಕೆರೆಯವರ ಕೃತಿ ‘ಕಾವೇರಿ ತೀರದ ಪಯಣ’ ಕೃತಿಯನ್ನು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ  ಹರೀಶ್ ಶೆಟ್ಟಿ ಬಿಡುಗಡೆಗೊಳಿಸಲಿದ್ದಾರೆ.  ದ.ಕ ಜಿಲ್ಲಾ ಪತ್ರ ಕರ್ತರ ಸಂಘದ ವಿಶೇಷ ಸಂಚಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಶಕ್ಷ ಶಿವಾನಂದ ತಗಡೂರು ನೆರವೇರಿಸಲಿದ್ದಾರೆ ಎಂದು ಹೇಳಿದರು.

Also Read  ಸವಣೂರು-ಮಾಡಾವು ರಸ್ತೆ ಕಾಮಗಾರಿ ಹಿನ್ನೆಲೆ ➤‌ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಮನವಿ

 

 

error: Content is protected !!