ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಗೊಂದಲ ➤ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹೊಯಿ-ಕೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆಗೆ ಸಂಬಂಧಿಸಿ, ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಮೂಲ, ವಲಸಿಗರು ಎಂಬ ವಿಚಾರಕ್ಕೆ ಚರ್ಚೆ ನಡೆದು ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿ, ಹೊಯಿ- ಕೈ ಆದ ಘಟನೆ ವರದಿಯಾಗಿದೆ.


ಸ್ಥಳೀಯರಲ್ಲದವರು ಟಿಕೆಟ್ ಗೆ ಅರ್ಜಿ ಹಾಕಿದ್ದು, ಅಂತವರಿಗೆ ಟಿಕೆಟ್ ನೀಡುವುದು ಬೇಡ. ಮನೋಹರ್, ಪದ್ಮಾವತಿ ಸ್ಥಳೀಯರು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಈ ವೇಳೆ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

Also Read  ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

error: Content is protected !!
Scroll to Top