ಮಂಗಳೂರು: ಹೃದಯಾಘಾತ- ಯೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ರಜೆಯ ಮೇಲೆ ಊರಿಗೆ ಬಂದಿದ್ದರು. ಶನಿವಾರದಂದು ಇವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top