ಬಾಬರಿ ಮಸೀದಿ ಸಂಬಂಧ ಕರಾಳ‌ ದಿನ ಹಾಗೂ ವಿಜಯೋತ್ಸವ ಆಚರಣೆಗೆ ನಿಷೇಧ ► ಇಂದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.06. ಡಿಸೆಂಬರ್ 6 ರಂದು ಬಾಬರಿ ಮಸೀದಿಯ ಕುರಿತಾದ ಕರಾಳ ದಿನ ಹಾಗೂ ವಿಜಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯಿದೆ ಕಲಂ 35 ರಂತೆ ಡಿಸೆಂಬರ್ 6 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಹಾಗೂ ಸಾರ್ವಜನಿಕ/ಧಾರ್ಮಿಕ/ರಾಜಕೀಯ ಬಹಿರಂಗ ಸಭೆ-ಸಮಾರಂಭಗಳನ್ನು, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖೋ ಹಾಗೂ ಮುತ್ತಿಗೆ ಮುಂತಾದವುಗಳನ್ನು ನಿರ್ಬಂಧಿಸಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್. ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ನಿರ್ಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

Also Read  ? ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿ ಬಿದ್ದ ಟಿಪ್ಪರ್ ➤ ಇಬ್ಬರು ಸ್ಥಳದಲ್ಲೇ ಮೃತ್ಯು

error: Content is protected !!
Scroll to Top