ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..!



(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ವರದಿಯಾಗಿದೆ.





ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದೆ. ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ  ಪಾತ್ರಾ, ತನ್ನ ಸ್ನೇಹಿತರೊಂದಿಗೆ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಪಾತ್ರ ಕಂಠಪೂರ್ತಿ ಮದ್ಯ ಸೇವಿಸಿದ್ದ ಪಾತ್ರಾ ಮನೆಗೆ ಹೋಗುತ್ತೇನೆಂದು ಹೇಳಿ ಕಟ್ಟಡದಿಂದ ಜಿಗಿದಿದ್ದು, ಮದ್ಯದ ಅಮಲಿನಲ್ಲಿದ್ದ ಆತ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top