ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ. 02. ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.  ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು ಎನ್ನಲಾಗಿದೆ. ಈ ಎಕ್ಸ್ಪ್ರೆಸ್‌ ವೇ’ಯ ಪ್ರಯೋಜನವು ಬಹಳಷ್ಟಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ತಿಳಿಸಿದ್ದರು.

Also Read  ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಉಳ್ಳಾಲದಲ್ಲಿ ಪತ್ತೆ..!!

 

error: Content is protected !!
Scroll to Top