(ನ್ಯೂಸ್ ಕಡಬ) newskadaba.com ಮಂಡ್ಯ, ಜ. 02. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ಸಂಭವಿಸಿದೆ.
ಮೃತ ಗೃಹಿಣಿಯನ್ನು ರಮ್ಯ(24) ಎಂದು ಗುರುತಿಸಲಾಗಿದೆ. ರಮ್ಯಾ ರವರು ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬವರೊಂದಿಗೆ ವಿವಾಹವಾಗಿದ್ದು, ಮದುವೆ ಸಂದರ್ಭ ಒಂದು ಲಕ್ಷ ರೂ. ನಗದು ಮತ್ತು 150 ಗ್ರಾಂ ಚಿನ್ನಾಭರಣ ವರದಕ್ಷಿಣೆ ಆಗಿ ಕುಮಾರ್ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೀಗ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಆಕೆಯನ್ನು ಪತಿ ಹಾಗೂ ಅತ್ತೆ, ಸಹೋದರಿಯರು ಸೇರಿ ಕೊಲೆ ಮಾಡಿ ಬಳಿಕ ನೇಣಿಗೆ ಹಾಕಿದ್ದಾರೆ ಎಂದು ರಮ್ಯಾಳ ಪೋಷಕರು ಆರೋಪಿಸಿದ್ದಾರೆ. ಈ ಕುರಿತು ಐಪಿಸಿ ಸೆಕ್ಷನ್ 302, 304 ಹಾಗೂ ವರದಕ್ಷಿಣೆ ಕಿರುಕುಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ವರದಿ ತಿಳಿಸಿದೆ.