ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                     

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 02. ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ಮೃತ ಯುವಕನನ್ನು ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಎಂದು ಗುರುತಿಸಲಾಗಿದೆ. ಲೈಟ್ ಹೌಸ್ ಬೀಚ್ ನಿಂದ 1.5 ಕಿ.ಮೀ ದೂರದಲ್ಲಿರುವ ರೇಡ್ ರಾಕ್ ಬೀಚ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸತ್ಯಂ ಮತ್ತು ಆತನ ಸ್ನೇಹಿತ ಸಮುದ್ರದಲ್ಲಿ ಈಜಲು ಹೋಗಿದ್ದ  ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ

 

Scroll to Top