ನೋಟು ಅಮಾನ್ಯೀಕರಣ ➤ ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು!

(ನ್ಯೂಸ್ ಕಡಬ) newskadaba.com ನವದೆಹಲಿ,  . 01  ಕೇಂದ್ರ ಸರ್ಕಾರವು 2016ರಲ್ಲಿ 500 ರೂ. ಮತ್ತು 1000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿತ್ತು. ಮೂಲಗಳ ಪ್ರಕಾರ, ನೋಟು ರದ್ದತಿ ತೀರ್ಪು ಎರಡು ಪ್ರತ್ಯೇಕ ಅಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ.

ನವದೆಹಲಿ: 1,000 ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ 2016ರ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್​ನ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಇಂದು ಈ ತೀರ್ಪು ಪ್ರಕಟಿಸಲಿದೆ. 2016ರ ನವೆಂಬರ್ ತಿಂಗಳಲ್ಲಿ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ 58 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಇಂದು (ಸೋಮವಾರ) ಆ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಲಿದೆ.

Also Read  2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..!

error: Content is protected !!
Scroll to Top