ನೋಟು ಅಮಾನ್ಯೀಕರಣ ➤ ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು!

(ನ್ಯೂಸ್ ಕಡಬ) newskadaba.com ನವದೆಹಲಿ,  ಜ. 01  ಕೇಂದ್ರ ಸರ್ಕಾರವು 2016ರಲ್ಲಿ 500 ರೂ. ಮತ್ತು 1000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿತ್ತು. ಮೂಲಗಳ ಪ್ರಕಾರ, ನೋಟು ರದ್ದತಿ ತೀರ್ಪು ಎರಡು ಪ್ರತ್ಯೇಕ ಅಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ.

ನವದೆಹಲಿ: 1,000 ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ 2016ರ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್​ನ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಇಂದು ಈ ತೀರ್ಪು ಪ್ರಕಟಿಸಲಿದೆ. 2016ರ ನವೆಂಬರ್ ತಿಂಗಳಲ್ಲಿ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ 58 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಇಂದು (ಸೋಮವಾರ) ಆ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಲಿದೆ.

Scroll to Top