ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ ➤ ಸಿಎಂ ಬೊಮ್ಮಾಯಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಕೆಎಂಎಫ್ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಂದಿನಿ ವಿಲೀನವಾಗಲಿದೆ ಎಂದು ಯಾರೂ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಮತ್ತು ಅಮುಲ್ ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

Also Read  ಈ 8 ರಾಶಿಯವರಿಗೆ ಮದುವೆ ಯೋಗ ಮಕ್ಕಳು ತಂದೆ-ತಾಯಿ ಮಾತು, ಕುಟುಂಬ ಕಲಹಗಳು ನಿವಾರಣೆಯಾಗುತ್ತವೆ

error: Content is protected !!
Scroll to Top