ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, 02. ನಗರದ ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ.

ಹೊಸ ವರ್ಷ ಹಾಗೂ ವೀಕೆಂಡ್ ಆದ ಕಾರಣ ತಣ್ಣೀರುಬಾವಿ ಬೀಚ್‌ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದರಿಂದ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ 6 ನೇ ತರಗತಿಯ ವಿದ್ಯಾರ್ಥಿ ಮತ್ತು ಪಿಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿರುವುದು ಕಂಡು ಸ್ಥಳೀಯರು ಗರಂ ಆಗಿದ್ದಾರೆ ಎನ್ನಲಾಗಿದೆ. ಲಾಠಿ ಏಟಿನಿಂದಾಗಿ 6ನೇ ತರಗತಿ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಸಾರ್ವಜನಿಕರು ಮೂವರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

Also Read  ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ

error: Content is protected !!
Scroll to Top