ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!!               

Crime

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಮಾಜಿ ಸಚಿವ, ಶಾಸಕ ಅರವಿಂದ ಲಿಂಬಾವಳಿ ಸೇರಿ ಪ್ರಭಾವಿ ರಾಜಕಾರಣಿಗಳ ಹೆಸರು ಬರೆದಿಟ್ಟು ಓರ್ವ ವ್ಯಕ್ತಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರದೀಪ್ (47) ಎಂದು ಗುರುತಿಸಲಾಗಿದೆ. ಡೆತ್ ನೋಟ್ ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಕಾರಿನಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Scroll to Top