ಮಂಗಳೂರು: ಆಹಾರ ಮಳಿಗೆಗೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ ➤ ಶುಚಿತ್ವ ಕೊರತೆಯ ಬಗ್ಗೆ ತೀವ್ರ ಆಕ್ರೋಶ

dc ravikumar

(ನ್ಯೂಸ್ ಕಡಬ) newskadaba.com ಮಂಗಳೂರು, 02. ಪಣಂಬೂರು ಬೀಚ್‌ ನಲ್ಲಿರುವ ಆಹಾರ ಮಳಿಗೆಗಳ ಮೇಲೆ ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ಸ್ವಚ್ಛತೆಯ ಕೊರತೆ ಕಂಡು ಬಂದ ಹಿನ್ನೆಲೆ ತಕ್ಷಣ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾಡಳಿತವು ಬ್ರಾಂಡ್ ಮಂಗಳೂರಿನ ಸಮುದ್ರ ಕಿನಾರೆಯ ಸ್ವಚ್ಛತೆಗೆ ಯೋಜನೆಯನ್ನು ಹಮ್ಮಿಕೊಂಡಿದ್ದು, ಅದರಂತೆ ಜಿಲ್ಲಾಧಿಕಾರಿ ಉದ್ಘಾಟನೆಗೆ ಆಗಮಿಸಿದ್ದರು. ಬಳಿಕ ಆಹಾರ ಸ್ಟಾಲ್‌ ಗಳು ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಸರ ಸ್ವಚ್ಛತೆಯ ಕುರಿತು ಕ್ಲಾಸ್ ತೆಗೆದುಕೊಂಡ ಅವರು, ಅಕ್ರಮವಾಗಿ ಕಟ್ಟಲ್ಪಟ್ಟ ಗೋಬಿ ಮಂಚೂರಿ ಅಂಗಡಿಗೆ ತೆರಳಿ, ಅಲ್ಲಿನ ಶುಚಿತ್ವದ ಕೊರತೆ ಕಂಡು ಆಕ್ರೋಷಿತರಾಗಿ ತಕ್ಷಣ ಅಂಗಡಿ ಮುಚ್ಚುವಂತೆ ಆದೇಶಿಸಿದ್ದಾರೆ. ಬಳಿಕ ಸಮೀಪದ ಎಲ್ಲಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಶುಚಿತ್ವದ ಕೊರತೆ ಕಂಡುಬಂದ ಮಳಿಗೆಗಳ ಮೇಲೆ ಬೀಗ ಮುದ್ರಿಸುವಂತೆ ಸೂಚನೆ ನೀಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಅಂಗಡಿ, ಹೋಟೆಲ್ ಮಾಲಕರಿಗೆ ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

Also Read  ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ➤ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ

error: Content is protected !!
Scroll to Top