ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆಯ ಸಹಯೋಗದಲ್ಲಿ 2023ರ ಜನವರಿ 6ರ ಶುಕ್ರವಾರ ಬೆಳಿಗ್ಗೆ 10ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜನಸಾರಿಗೆ ಸಚಿವರಾದ ಎಸ್. ಅಂಗಾರ ಮತ್ತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮಂಗಳೂರು ಮೇಯರ್ ಜಯಾನಂದ ಅಂಚನ್ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡುವರು. ಸಂಸದರಾದ ನಳಿನ್ ಕುಮಾರ್ ಕಟೀಲ್ ಗೌರವ ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಉಮಾನಾಥ್ ಎ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆಯ ಸದಸ್ಯೆ ಸಂಧ್ಯಾ ಎಂ. ಆಚಾರ್ ಭಾಗವಹಿಸುವರು.

ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ. ಪೊನ್ನುರಾಜ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಮುಲ್ಲೈ ಮುಹಿಲನ್, ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿರುವರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Also Read  ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಅರೆಸ್ಟ್

error: Content is protected !!
Scroll to Top