ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 02. ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡ ಘಟನೆ ಪಾಲಿಯ ರಾಜ್ಕಿವಾಸ್‌ನಲ್ಲಿ ಸಂಭವಿಸಿದೆ ಎನ್ನಲಾಗಿದೆ.

ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು ಜೋಧ್‌ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಲ್‌ನಿಂದ ಹೊರಟ ರೈಲು ಜೋಧ್‌ಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಯುವ್ಯ ರೈಲ್ವೆಯ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅಪಘಾತ ಸ್ಥಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ವಾಯುವ್ಯ ರೈಲ್ವೆಯ ಸಿಪಿಆರ್‌ಒ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

 

Scroll to Top