ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02. ಇಲ್ಲಿನ ಪಂಚಾಯತ್ ಪಿಡಿಒ ಅವರ ಕರ್ತವ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಸದಸ್ಯರೋರ್ವರು ತಡೆಯೊಡ್ಡಿ, ಬಳಿಕ ಹಲ್ಲೆಗೆ ಯತ್ನಿಸಿದ ಬಗ್ಗೆ ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದ ಪೆರಿಯಡ್ಕ ನೆಡ್ಚಿಲ್ ಎಂಬಲ್ಲಿ ನಡೆಯಲಿರುವ ಪಂದ್ಯಾಟಕ್ಕೆ ಸಂಬಂಧಿಸಿದಂತೆ ಬ್ಯಾನರ್ ಒಂದನ್ನು ಅನುಮತಿಯಿಲ್ಲದೇ ಹಾಕಿದ ಹಿನ್ನೆಲೆ ಪಿಡಿಒ ಸೂಚನೆಯಂತೆ ತೆರವು ಮಾಡಲು ಮುಂದಾಗಿದ್ದು ಈ ವೇಳೆ ಸ್ಥಳೀಯರು ಪ್ರತಿಭಟಿಸಿದ್ದಾರೆ. ಈ ಕುರಿತು ಪಂಚಾಯತ್ ಸಿಬ್ಬಂದಿ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪಿಡಿಒ ವಿಲ್ಫ್ರೆಡ್ ರೋಡ್ರಿಗಸ್ ಅವರು, ಸ್ವತಃ ಬ್ಯಾನರ್ ತೆರವಿಗೆ ಮುಂದಾಗಿದ್ದು, ಈ ಸಂದರ್ಭ ಪಂಚಾಯತ್ ಸದಸ್ಯರಾದ ಸುರೇಶ್ ಅತ್ರಮಜಲು, ಬಿಜೆಪಿ ಕಾರ್ಯಕರ್ತರಾದ ರಮೇಶ್ ಹಾಗೂ ರೋಹಿತ್ ಮತ್ತಿತರರು ಬ್ಯಾನರ್ ತೆಗೆಯದಂತೆ ತಡೆಯೊಡ್ಡಿ ಪಿಡಿಒ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  500 ಕೋಟಿ ರೂ. ವಂಚನೆ ಪ್ರಕರಣ ➤ ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ..!!

error: Content is protected !!
Scroll to Top