ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಶಾಲಾ ಮಕ್ಕಳ ಪ್ರವಾಸದ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ವರದಿಯಾಗಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

Also Read  ಉಡುಪಿ: ಅಸ್ವಸ್ಥ ಸ್ಥಿತಿಯಲ್ಲಿದ್ದ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರ ➤ ವಾರೀಸುದಾರರು ಸಂಪರ್ಕಿಸುವಂತೆ ಸಮಾಜಸೇವಕರ ಸೂಚನೆ

error: Content is protected !!
Scroll to Top