ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಪ್ರೀತಿ ವಿಚಾರಕ್ಕೆ ಪ್ರೇಮಿಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಂಭವಿಸಿದೆ.

ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ್ದ ಕೋಲಾರ ಮೂಲದ ಯುವಕ ಕಾಲೇಜು ಅವರಣದಲ್ಲೇ ಯುವತಿಗೆ ಇರಿದು, ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಮೂಲಗಳ ಪ್ರಕಾರ ಪ್ರೀತಿ ಪ್ರೇಮದ ವಿಚಾರಕ್ಕೆ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಯುವತಿಗೆ ಇರಿದ ಯುವಕ ಕಾಲೇಜಿನ ವಿದ್ಯಾರ್ಥಿಯಲ್ಲ. ನಿತ್ಯ ಆಕೆಯನ್ನು ಹಿಂಬಾಲಿಸಿ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಪಿಯುಸಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ

 

error: Content is protected !!
Scroll to Top