ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರು ಅಲ್ಲದೆ ಸಹಕಾರಿ ಸಂಘಗಳಲ್ಲಿನ ಸದಸ್ಯರಿಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದು, ಈ ಯೋಜನೆಯ ಅಡಿಯಲ್ಲಿ ಸದಸ್ಯರ ನೋಂದಣಿಗೆ ನೀಡಲಾಗಿದ್ದಂತ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಿ ಸಹಕಾರಿ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ.

ಈ ಸಂಬಂಧ ಸಹಕಾರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ 01-11-2022 ರಿಂದ ದಿನಾಂಕ 31-12-2022 ರವರೆಗೆ ನಿಗದಿಗೊಳಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.

Also Read  ಕಡಬ ತಾಲೂಕು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕಾರ್ಯಕರ್ತರ ಸಮಾವೇಶ

 

error: Content is protected !!
Scroll to Top